ಸುಳ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಸುಳ್ಯ ನಗರ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯಲ್ಲಿ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್. ಗಂಗಾಧರ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಮಾತನಾಡಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಮುಸ್ತಫ, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ. ಶಶಿಧರ್, ಇಂಟೆಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಸಿದ್ದೀಕ್ ಕೊಕ್ಕೊ, ರಾಜು ಪಂಡಿತ್, ರಿಯಾಜ್ ಕಟ್ಟೆಕಾರ್, ಪ್ರಮುಖರಾದ ಐ.ಕೆ. ಇಕ್ಬಾಲ್ ಎಲಿಮಲೆ, ರಂಜಿತ್ ರೈ ಮೇನಾಲ,ಸತ್ಯಕುಮಾರ್ ಆಡಿಂಜ, ಜಯಪ್ರಕಾಶ್ ನೆಕ್ರಪ್ಪಾಡಿ, ಧರ್ಮಪಾಲ ಕೊಯಿಂಗಾಜೆ, ಶಹೀದ್ ಪಾರೆ, ಭವಾನಿಶಂಕರ ಕಲ್ಮಡ್ಕ, ಚೇತನ್ ಕಜೆಗದ್ದೆ, ರಾಹುಲ್ ಅಡ್ಪಂಗಾಯ, ನಂದರಾಜ ಸಂಕೇಶ, ರಾಧಾಕೃಷ್ಣ ಪರಿವಾರಕಾನ, ಚಂದ್ರಲಿಂಗಂ ಐವರ್ನಾಡು, ಭೋಜಪ್ಪ ನಾಯ್ಕ, ಜತ್ತಪ್ಪ ರೈ ಸುಳ್ಯ ಮತ್ತಿತರರು ಇದ್ದರು.