ಸುಳ್ಯ:ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಿದ ಲಾಠಿ ಚಾರ್ಜ್ ವಿರುದ್ಧ ಪ್ರತಿಭಟಿಸುತ್ತಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ,ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆಯನ್ನು ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ನಡೆದ
ಪ್ರತಿಭಟನೆಯಲ್ಲಿ ಘಟನೆಯನ್ನು ಖಂಡಿಸಿ ಪ್ರಮುಖರು ಮಾತನಾಡಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಆರೋಪಿಸಿದರು.
ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಲಕ್ಷ್ಮೀಶ ಗಬ್ಬಲಡ್ಕ, ಪಿ.ಎಸ್.ಗಂಗಾಧರ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ವಂದಿಸಿದರು, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಟನೆಯಲ್ಲಿ

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಪ್ರಮುಖರಾದ ರಾಜೀವಿ ಆರ್. ರೈ, ಎಸ್.ಸಂಶುದ್ದೀನ್, ಕೆ.ಪಿ.ಜಾನಿ ಕಲ್ಲುಗುಂಡಿ, ಅಬ್ದುಲ್ ಗಫೂರ್ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಧನುಷ್ ಕುಕ್ಕೆಟ್ಟಿ, ರಾಜು ಪಂಡಿತ್, ಬಾಲಕೃಷ್ಣ ಭಟ್ ಕೊಡೆಂಕೇರಿ, ಪದ್ಮನಾಭ ಹರ್ಲಡ್ಕ, ಮನ್ಸೂರ್ ಮೆಟ್ರೋ, ಎಸ್.ಕೆ.ಹನೀಫ್, ಸಿದ್ದಿಕ್ ಕೊಕ್ಕೊ, ಧೀರಾ ಕ್ರಾಸ್ತಾ, ರಂಜಿತ್ ರೈ ಮೇನಾಲ, ಶರೀಫ್ ಕಂಠಿ, ಶ್ರೀಹರಿ ಕುಕ್ಕುಡೇಲು, ದಿನೇಶ್ ಅಂಬೆಕಲ್ಲು ಮಹಮ್ಮದ್ ಫವಾಝ್, ಸುಂದರಿ ಮುಂಡಡ್ಕ, ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ಪ್ರಸಾದ್ ರೈ ಮೇನಾಲ, ಸತ್ಯಕುಮಾರ್ ಆಡಿಂಜ, ನಂದರಾಜ ಸಂಕೇಶ್, ರಾಧಾಕೃಷ್ಣ ಪರಿವಾರಕಾನ, ಸುರೇಶ್ ಕಾಮತ್, ಇಬ್ರಾಹಿಂ ಶಿಲ್ಪಾ, ಅಚ್ಚುತ ಮಲ್ಕಜೆ, ಭೋಜಪ್ಪ ನಾಯ್ಕ,ಅಬ್ಬಾಸ್ ಅಡ್ಪಂಗಾಯ, ರಾಜು ನೆಲ್ಲಿಕುಮೇರಿ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.








