ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಸಭೆ ಇಂದು ಸುಳ್ಯದ ಸದರ್ನ್ ರೆಸಿಡೆನ್ಸಿಯಲ್ಲಿ ಆರಂಭಗೊಂಡಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ ಸಭೆಯನ್ನು ಉದ್ಘಾಟಿಸಿ
ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್, ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಮುಖಂಡರಾದ ಜಿ.ಕೃಷ್ಣಪ್ಪ, ರಾಜೀವಿ ಆರ್ ರೈ,ಎಂ.ವೆಂಕಪ್ಪ ಗೌಡ, ಗೀತಾ ಕೋಲ್ಚಾರ್, ಶುಭಾಶ್ಚಂದ್ರ ಶೆಟ್ಟಿ, ಸದಾನಂದ ಮಾವಜಿ, ಪಿ.ಎಸ್.ಗಂಗಾಧರ, ಕಳಂಜ ವಿಶ್ವನಾಥ ರೈ, ವಿವಿಧ ಘಟಕಗಳ ಅಧ್ಯಕ್ಷರಾದ ಸುರೇಶ್ ಅಮೈ, ಶಾಫಿ ಕುತ್ತಮೊಟ್ಟೆ, ಹಮೀದ್ ಕುತ್ತಮೊಟ್ಟೆ, ದಿನೇಶ್ ಅಂಬೆಕಲ್ಲು, ಇಸ್ಮಾಯಿಲ್ ಪಡ್ಪಿನಂಗಡಿ, ಪರಮೇಶ್ವರ ಕೆಂಬಾರೆ, ಜಯಪ್ರಕಾಶ್ ನೆಕ್ರಪ್ಪಾಡಿ ಉಪಸ್ಥಿತರಿದ್ದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿದರು.

ಶೋಕಾಸ್ ನೋಟೀಸ್ ಪಡೆದವರು, ಅಮಾನತು ಆದೇಶ ಪಡೆದವರು, ಉಚ್ಚಾಟಿತರು ಸೇರಿ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದಾರೆ. ಸಭಾಂಗಣ ತುಂಬಿ ತುಳುಕಿದೆ.
ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಯ ಹಿನ್ನಲೆಯಲ್ಲಿ ಸಭೆ ಕರೆಯಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಸೋಲು ಬಳಿಕದ ಬೆಳವಣಿಗೆಗಳು, ಕೆಲವು ಮುಖಂಡರಿಗೆ ಶೋಕಾಸ್ ನೋಟೀಸ್ ನೀಡಿರುವುದು, ಕೆಲವು ಕಾರ್ಯಕರ್ತರನ್ನು ಉಚ್ಚಾಟನೆ ಮಾಡಿರುವ ವಿಚಾರ ಸಭೆಯಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ. .