ಸುಳ್ಯ:ಸಹಕಾರಿ ಸಂಘಗಳ ಚುನಾವಣೆ ತಯಾರಿ ಬಗ್ಗೆ ಮತ್ತು ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಪಿ. ಸಿ ಜಯರಾಮ ಅಧ್ಯಕ್ಷತೆಯಲ್ಲಿ ಕಾರ್ಯಕರ್ತರ ಸಭೆ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಸಹಕಾರಿ ಸಂಘಗಳ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು ಮತ್ತು ತಾಲೂಕಿನ ಮುಖಂಡರುಗಳನ್ನು ಸಹಕಾರಿ ಸಂಘಗಳ ಚುನಾವಣೆಗಾಗಿ
ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯೆ ಸರಸ್ವತಿ ಕಾಮತ್, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು, ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟಕ್ ಕಾಂಗ್ರೆಸ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಕಲ್ಮಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಜಿಲ್ಲಾ ಎಸ್ ಟಿ ಘಟಕ ಉಪಾಧ್ಯಕ್ಷ ಭವಾನಿಶಂಕರ್ ಕಲ್ಮಡ್ಕ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ಗೀತಾ ಕೋಲ್ಚಾರು, ಪೆರುವಾಜೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ರಾಜ್ ಶೆಟ್ಟಿ, ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ್ ಅಮೈ, ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯ ಅನಿಲ್ ರೈ ಬೆಳ್ಳಾರೆ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಕೊಯಿಕುಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಂಗಾಧರ ಪಿ.ಎಸ್, ಜಿಲ್ಲಾ ಕೆ.ಡಿ.ಪಿ ಸದಸ್ಯೆ ಸುಜಯಕೃಷ್ಣ , ಮಾಜಿ ಅಕ್ರಮ ಸಕ್ರಮ ಸದಸ್ಯ ಮಹಮ್ಮದ್ ಕುಂಞಿ ಗೂನಡ್ಕ, ಪ್ರವೀಣಾ ರೈ ಮರುವಂಜ, ಅಜ್ಜಾವರ ಗ್ರಾಮ ಪಂಚಾಯಿತಿ ಸದಸ್ಯೆ ಲೀಲಾ ಮನಮೋಹನ್, ಆಲೆಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಧರ್ಮಪಾಲ ಕೊಯಿಂಗಾಜೆ, ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ
ಧರ್ಮಣ್ಣ ನಾಯ್ಕ್ ಗರೋಡಿ, ಮಹೇಶ್ ಬೆಳ್ಳಾರ್ಕರ್, ಕೇಶವ್ ಮೊರಂಗಲ್ಲು, ರವಿಕುಮಾರ್ ಕಿರಿಭಾಗ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ರಾಜು ನೆಲ್ಲಿಕುಮೇರಿ, ಸುಳ್ಯ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೋ, ಜಿ.ಕೆ ಹಮೀದ್, ವಿಶ್ವನಾಥ ರೈ ಕಳಂಜ, ದಿನೇಶ್ ಸರಸ್ವತಿಮಹಲ್, ವಿನೂಪ್ ಮಲ್ಲಾರ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ರಾಧಾಕೃಷ್ಣ ಪರಿವಾರಕಾನ, ತೀರ್ಥರಾಮ ಜಾಲ್ಸೂರು,ಯಶೋಧರ ಬಾಕಿಲ, ದಯಾನಂದ ಕಟ್ಟೆಮನೆ, ಯೂಸುಫ್ ಅಂಜಿಕಾರ್, ಅಬ್ಬಾಸ್ ಅಜ್ಜಾವರ, ಚೇತನ್ ಕಜೆಗದ್ದೆ ಮತ್ತು ಪಕ್ಷದ ವುವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.