ಬೆಂಗಳೂರು: ಜನವರಿ 21ರಂದು ಮಂಗಳೂರಿನಲ್ಲಿ ನಿಗದಿ ಮಾಡಲಾಗಿದ್ದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದ್ದು, ಸಮಾವೇಶದ ಮುಂದಿನ ದಿನಾಂಕವನ್ನು ಶೀಘ್ರದಲ್ಲಿದಲ್ಲಿಯೇ ತಿಳಿಸಲಾಗುವುದು ಎಂದು
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಜ. 21ರಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ಸಮಾವೇಶವನ್ನು ಮುಂದೂಡಿದ್ದು, ಶೀಘ್ರದಲ್ಲಿದಲ್ಲಿಯೇ ಹೊಸ ದಿನಾಂಕವನ್ನು ತಿಳಿಸಲಾಗುವುದು. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಸಲು ಕೈಗೊಳ್ಳಬೇಕಾದ ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಹಾಗೇಯೇ ಮುಂದುವರಿಸಲು ಸೂಚಿಸಿದ್ದಾರೆ.









