ಸುಳ್ಯ:ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಮುನ್ನ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಸರಕಾರಕ್ಕೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಿಹಿ ತಿಂಡಿ ಹಂಚಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ, ಬ್ಲಾಕ್ ಮಹಿಳಾ ಕಾಂಗ್ರೆಸ್
ಅಧ್ಯಕ್ಷೆ ಗೀತಾ ಕೋಲ್ಚಾರ್ ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುವ ಸರಕಾರ. ಎಲ್ಲಾ ಅಡೆತಡೆಗಳನ್ನು ಮೀರಿ ನಿಂತು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಎಲ್ಲಾ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡಲಿದೆ ಎಂದು ಹೇಳಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಪ್ರಮುಖರಾದ ರಾಜೀವಿ ಆರ್ ರೈ, ಸುರೇಶ್ ಎಂ.ಎಚ್, ಪಿ.ಎಸ್.ಗಂಗಾಧರ, ಕೆ.ಗೋಕುಲ್ದಾಸ್, ಶರೀಫ್ ಕಂಠಿ, ಡೇವಿಡ್ ಧೀರಾ ಕ್ತಾಸ್ತಾ, ಸಿದ್ದಿಕ್ ಕೊಕ್ಕೊ, ಶಾಫಿ ಕುತ್ತಮೊಟ್ಟೆ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಭವಾನಿಶಂಕರ ಕಲ್ಮಡ್ಕ, ರಾಜು ಪಂಡಿತ್, ಕೀರ್ತನ್ ಕೊಡಪಾಲ, ಫವಾಜ್ ಕನಕಮಜಲು, ನಂದರಾಜ ಸಂಕೇಶ್, ರಫೀಕ್ ಪಡು, ಅನಿಲ್ ಬಳ್ಳಡ್ಕ, ಜಯಪ್ರಕಾಶ್ ನೆಕ್ರಪ್ಪಾಡಿ, ಲೀಲಾ ಮನಮೋಹನ್, ಪ್ರವೀಣಾ ಮರುವಂಜ, ಹಾಜಿರಾ, ಜೂಲಿಯಾ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು. ಸದಾನಂದ ಮಾವಜಿ ಸ್ವಾಗತಿಸಿ, ಪಿ.ಎಸ್.ಗಂಗಾಧರ ವಂದಿಸಿದರು.