ಸುಳ್ಯ:ಸಂಘಟನ್ ಸೃಜನ್ ಅಭಿಯಾನ-2ರ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ವೀಕ್ಷಕರಾದ ಡಾ. ಅಂಶುಮಂತ್, ಸತೀಶ್ ಹಾಗೂ ಸದಾಶಿವ ಸಂಘಟನ್ ಸೃಜನ್ ಕುರಿತು ಮಾತನಾಡಿದರು.ಸಂಘಟನ್ ಸೃಜನ್ ಅಭಿಯಾನ-2ರಡಿ ಜಿಲ್ಲಾ ಕಾಂಗ್ರೆಸ್ ಸಮಿತಿ(ಡಿಸಿಸಿ), ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ, ಬ್ಲಾಕ್ ಪದಾಧಿಕಾರಿಗಳ ಪಟ್ಟಿ, ಮಂಡಲ ಅಧ್ಯಕ್ಷರ ನೇಮಕಾತಿ ಹಾಗೂ ಬೂತ್ ಸಮಿತಿಗಳ ರಚನೆ ಸೇರಿದಂತೆ ಸಂಘಟನಾ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಲಾಯಿತು.ಈ ವಿಷಯದ ಕುರಿತು

ಪಕ್ಷದ ಮುಖಂಡರು ಹಾಗೂ ಪ್ರಮುಖ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸುಳ್ಯ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ, ಮುಖಂಡರಾದ ಭರತ್ ಮುಂಡೋಡಿ,
ಧನಂಜಯ ಅಡ್ಪಂಗಾಯ,ಟಿ.ಎಂ.ಶಹೀದ್ ತೆಕ್ಕಿಲ್ ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ ವಂದಿಸಿದರು, ಶಶಿಧರ ಎಂ.ಜೆ.ಕಾರ್ಯಕ್ರಮ ನಿರೂಪಿಸಿದರು.









