ಪಂಜ: ಸುಳ್ಯ ಬ್ಲಾಕ್ ಕಾಂಗ್ರೆಸ್ ಮತ್ತು ಪಂಜ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸತ್ಯ ದರ್ಶನ ಸಭೆ ಪಂಜದಲ್ಲಿ ನಡೆಯಿತು. ಬಿಜೆಪಿ ಮತ್ತು ಸಂಘ ಪರಿವಾರ ಸಂಘಟನೆಗಳು ಪಂಜದಲ್ಲಿ ನಡೆಸಿದ ಪ್ರತಿಭಟನೆಗೆ
ಪ್ರತಿಯಾಗಿ ಕಾಂಗ್ರೆಸ್ ಸತ್ಯದರ್ಶನ ಸಭೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಬಿ. ರಮಾನಾಥ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಮಹೇಶ್ ಕುಮಾರ್ ಕರಿಕ್ಕಳ ,ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಡಾ.ರಘು, ಸರಸ್ವತಿ ಕಾಮತ್, ಅಶೋಕ್ ನೆಕ್ರಾಜೆ,ಪಂಜ ವಲಯ ಕಾಂಗ್ರೆಸ್ ಅಧ್ಯಕ್ಷ ಕೇಶವ ಕುದ್ವ ಮತ್ತಿತರರು ಉಪಸ್ಥಿತರಿದ್ದರು.