ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ನ ವಿಶೇಷ ಸಭೆ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.ಎಐಸಿಸಿ ಕಾರ್ಯದರ್ಶಿ ಹಾಗು ವಿಧಾನ ಪರಿಷತ್ ಸದಸ್ಯರಾದ ಪಿ.ವಿ. ಮೋಹನ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು.ಪಕ್ಷ ಸಂಘಟನೆ, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗು
ನಗರ ಪಂಚಾಯತ್ ಚುನಾವಣೆಯ ಪೂರ್ವ ತಯಾರಿ ಕುರಿತು ಚರ್ಚಿಸಲಾಯಿತು.ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ, ಭಾರತ್ ಜೋಡೋ ಯುವ ಸಂಘ ರಚನೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಪಿ.ವಿ.ಮೋಹನ್ ಅವರು ಮಾತನಾಡಿ ‘ಸುಳ್ಯದಲ್ಲಿ ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡಲು ಆದ್ಯತೆ ನೀಡಲಾಗುವುದು. ಗ್ರಾಮಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲುವುದರ ಜೊತೆಗೆ ವಿಧಾನ ಸಭೆ ಚುನಾವಣೆಯಲ್ಲಿ ಸುಳ್ಯದಿಂದ ಕಾಂಗ್ರೆಸ್ ಶಾಸಕರು ಆಯ್ಕೆಯಾಗುವ ನಿಟ್ಟಿನಲ್ಲಿ ಪಕ್ಷ ಸಂಘಟನೆಯಾಗಬೇಕಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಅಸಮಾಧಾನ:
ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸೇರಿದಂತೆ ವಿವಿಧ ನೇಮಕಾತಿ ಪ್ರಕ್ರಿಯೆಗಳ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.ಹಿಂದಿನ ಸಮಿಗೆ ತಿಳಿಯದೆ, ಹೊಸ ಸಮಿತಿ ನೇಮಕ ಮಾಡಲಾಗಿದೆ.ಮುಖಂಡರಿಗೆ ಬೇಕಾದಂತೆ ನೇಮಕಾತಿ ನಡೆಸಲಾಗುತ್ತದೆ. ವಿವಿಧ ಸಮಿತಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೇಮಕ ಸಂದರ್ಭದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತದೆ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಈ ವಿಷಯದಲ್ಲಿ ಚರ್ಚೆ, ವಾಗ್ವಾದ ನಡೆದಾಗ ಮುಖಂಡರು ಸಮಾಧಾನ ಪಡಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕಡಬ ತಾಲೂಕು ಅಧ್ಯಕ್ಷ ಜಿ.ಕೃಷ್ಣಪ್ಪ, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಪಿ.ಎಸ್.ಗಂಗಾಧರ, ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ,ಮುಖಂಡರಾದ ಎಸ್.ಸಂಶುದ್ದಿನ್, ಟಿ.ಕೆ.ಸುಧೀರ್, ಶಾಫಿ ಕುತ್ತಮೊಟ್ಟೆ, ಸುರೇಶ್ ಎಂ.ಎಚ್, ದಿನೇಶ್ ಅಂಬೆಕಲ್ಲು, ಸುರೇಶ್ ಎಂ.ಎಚ್, ಇಸ್ಮಾಯಿಲ್ ಪಡ್ಪಿನಂಗಡಿ, ಧನುಷ್ ಕುಕ್ಕೆಟ್ಟಿ, ಸುಜಯಾ ಕೃಷ್ಣ, ಎನ್ಎಸ್ಡಿ ವಿಠಲದಾಸ್, ಪರಮೇಶ್ವರ ಕೆಂಬಾರೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಂ.ವೆಂಕಪ್ಪ ಗೌಡ, ಮಹೇಶ್ ಕುಮಾರ್ ಕರಿಕ್ಕಳ, ಮಹಮ್ಮದ್ ಕುಂಞಿ ಗೂನಡ್ಕ, ಶಾಹುಲ್ ಹಮೀದ್ ಕುತ್ತಮೊಟ್ಟೆ, ಸಿದ್ದಿಕ್ ಕೊಕ್ಕೊ,ಶರೀಪ್ ಕಂಠಿ, ಜುನೈದ್ ಅಡ್ಕಾರ್, ವಿಜಯಕುಮಾರ್, ಮಜೀದ್ ಮತ್ತಿತರರು ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭವಾನಿಶಂಕರ ಕಲ್ಮಡ್ಕ ವಂದಿಸಿದರು. ದಿನೇಶ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು.










