ಸುಳ್ಯ:ಕಾಂಗ್ರೆಸ್ ನಾಯಕರಾದ ಹೆಚ್.ಎಂ. ನಂದಕುಮಾರ್, ಎಂ.ವೆಂಕಪ್ಪ ಗೌಡ ಹಾಗು ಬಾಲಕೃಷ್ಣ ಬಳ್ಳೇರಿಯವರಿಗೆ ಕೆಪಿಸಿಸಿ ಶಿಸ್ತು ಸಮಿತಿ ಶೋಕಾಸ್ ನೋಟೀಸ್ ನೀಡಿದೆ ಎಂದು ವರದಿಯಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ದವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದೀರಿ ಎಂದು ಕೆಪಿಸಿಸಿಗೆ ಲಿಖಿತ
ದೂರು ಬಂದಿದೆ. ತಾವುಗಳು ಮುಂದಿನ 7 ದಿನಗಳೊಳಗೆ ಉತ್ತರ ನೀಡಬೇಕೆಂದು ಈ ಬಗ್ಗೆ ತಮ್ಮ ವಿವರಣೆಯನ್ನು ಪತ್ರ ತಲುಪಿದ 7 ದಿವಸಗಳೊಳಗಾಗಿ ಕೆಪಿಸಿಸಿ ಕಚೇರಿಗೆ ಕಳುಹಿಸಿ ಕೊಡುವಂತೆ ಶಿಸ್ತು ಸಮಿತಿಯು ಈ ಮೂವರು ನಾಯಕರಿಗೂ ಪ್ರತ್ಯೇಕ ಪ್ರತ್ಯೇಕವಾಗಿ ಕಳುಹಿಸಿದ ನೋಟೀಸ್ ನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರ ಮಾಡದೆ ಪಕ್ಷದ ವಿರುದ್ದವೇ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದೀರಿ ಎಂದು ಕಾಂಗ್ರೆಸ್ ಮುಖಂಡರಾದ ಮಹೇಶ್ ಭಟ್ ಕರಿಕ್ಕಳ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಭವಾನಿ ಶಂಕರ ಕಲ್ಮಡ್ಕ, ಗೋಕುಲ್ ದಾಸ್, ಚೇತನ್ ಕಜೆಗದ್ಯ, ಶಶಿಧರ್ ಮಾಸ್ಟರ್, ಉಷಾ ಅಂಚನ್, ಆಶಾ ಲಕ್ಷ್ಮಣ್, ಪ್ರವೀಣ್ ಕೆಡೆಂಜಿ, ರವೀಂದ್ರ ರುದ್ರಪಾದ, ಫೈಜಲ್ ಕಡಬ ಸೇರಿದಂತೆ ಸುಳ್ಯ ಹಾಗೂ ಕಡಬ ಬ್ಲಾಕ್ನ ಹಲವು ಮಂದಿ ಮುಖಂಡರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. ಬ್ಲಾಕ್ ಕಾಂಗ್ರೆಸ್ ಶಿಫಾರಸ್ಸಿನ ಮೇರೆಗೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.