ಸುಳ್ಯ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಖಂಡಿಸಿ ಜುಲೈ 12 ರ ಬೆಳಿಗ್ಗೆ 10ರಿಂದ ಸಂಜೆ 5ರ ತನಕ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ದೇಶಾದ್ಯಂತ ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಲಿದ್ದಾರೆ.ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ
ಕಾಂಗ್ರೆಸ್ ನಾಯಕರು ಮೌನ ಪ್ರತಿಭಟನೆ ನಡೆಸಲಿದ್ದಾರೆ. ಜು.12ರಂದು ಬೆಳಗಿನಿಂದ ಸಂಜೆಯವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸುಳ್ಯದಲ್ಲಿ ಪೂ.10 ಗಂಟೆಯಿಂದ ಸುಳ್ಯ ಮಿನಿ ವಿಧಾನಸೌಧದ ಎದುರು ‘ಮೌನ ಪ್ರತಿಭಟನೆ’ ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.