ನವದೆಹಲಿ:ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾಗಿ ಬುಧವಾರ ಅಧಿಕಾರವಹಿಸಿ ಕೊಂಡಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ, ಪಕ್ಷದ ಉನ್ನತ ಸಮಿತಿ (ಸ್ಟೇರಿಂಗ್ ಕಮಿಟಿ) ರಚಿಸಿದ್ದಾರೆ. ಸೋನಿಯಾ ಗಾಂಧಿ, ಮನ್‌ಮೋಹನ್ ಸಿಂಗ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ 47 ಮಂದಿ
ಪ್ರಮುಖರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಜಾಗದಲ್ಲಿ ಕೆಲಸ ಮಾಡಲಿದೆ.ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಮುಂದಿನ ಎಐಸಿಸಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ.
ಪಕ್ಷಕ್ಕೆ ಹೊಸ ಅಧ್ಯಕ್ಷರು ಆಯ್ಕೆಯಾದ ಬೆನ್ನಲ್ಲೇ ಇಂದು ಬೆಳಿಗ್ಗೆ ವಾಡಿಕೆಯಂತೆ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಗಿತ್ತು.
ರಾಜೀನಾಮೆ ನೀಡಿದ ಪಕ್ಷದ ಎಲ್ಲ ಪ್ರಮುಖರನ್ನು ಈಗ ಹೊಸ ಸಮಿತಿಗೆ ಸೇರಿಸಿಕೊಳ್ಳಲಾಗಿದೆ.ಎಐಸಿಸಿ ಹೊಸದಾಗಿ ರಚಿಸಿದ ಕಮಿಟಿಯಲ್ಲಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರಾದ ಹೆಚ್.ಕೆ. ಪಾಟೀಲ್, ಕೆ.ಹೆಚ್. ಮುನಿಯಪ್ಪ ಹಾಗೂ ದಿನೇಶ್ ಗುಂಡೂರಾವ್‌ಗೆ ಅವರಿಗೆ ಸ್ಥಾನ ಸಿಕ್ಕಿದೆ.