ಸುಳ್ಯ:ಕಾಂಗ್ರೆಸ್ನಲ್ಲಿ ಉಂಟಾಗಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಒಂದು ಬಣ ಕಾಂಗ್ರೆಸ್ ಉಳಿಸಿ ಆಂದೋಲನ ಆರಂಭಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ನ ಕೆಲವು ಮುಖಂಡರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಉಳಿಸಿ ಆಂದೋಲನ ನಡೆಸಲಾಗುತ್ತಿದ್ದು ಸುಳ್ಯವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ಸೆ.18 ರಂದು ಅ.3 ಗಂಟೆಗೆ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ಕರೆಯಲಾಗಿದೆ ಎಂದು
ಬ್ಲಾಕ್ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಭವಾನಿಶಂಕರ ಕಲ್ಮಡ್ಕ ತಿಳಿಸಿದ್ದಾರೆ. ಸುಳ್ಯದಲ್ಲಿ ಕಳೆದ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಮೂಡಿರುವ ಗೊಂದಲ, ಮತ್ತು ಇತ್ತೀಚಿಗೆ ಕೆಲವೊಂದು ಸಮಿತಿಗಳಿಗೆ ಬಿಜೆಪಿಯವರನ್ನು ಮತ್ತು ಕಾಂಗ್ರೆಸೇತರ ವ್ಯಕ್ತಿಗಳಿಗೆ ನಾಮನಿರ್ದೇಶನ ಮಾಡಿರುವುದು,ಅಧಿಕಾರಿಗಳ ವರ್ಗಾವಣೆ, ಹಾಗು ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿ ಸುಳ್ಯದಲ್ಲಿ ಕಾಂಗ್ರೆಸ್ ಉಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಸುಳ್ಯದಲ್ಲಿ ಕಾಂಗ್ರೆಸ್ ಉಳಿಸಿ ಅಭಿಯಾನದ ಬಗ್ಗೆ ರೂಪುರೇಷೆ ತಯಾರಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ ಎಂದು ಭವಾನಿಶಂಕರ ಕಲ್ಮಡ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂದಕುಮಾರ್ ಅವರಿಗೆ ಪಕ್ಷದ ಟಿಕೆಟ್ ನೀಡದ ಸಂದರ್ಭದಲ್ಲಿ ನಂದಕುಮಾರ್ ಅಭಿಮಾನಿ ಬಳಗ ರೂಪಿಸಿ ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ನಿಟ್ಟಿನಲ್ಲಿ ಹೋರಾಟ ನಡೆಸಿದ್ದರು. ಇದೀಗ ಅದೇ ಬಣದ ಪ್ರಮುಖರ ನೇತೃತ್ವದಲ್ಲಿ ಕಾಂಗ್ರೆಸ್ ಉಳಿಸಿ ಆಂದೋಲನ ನಡೆಸಲಾಗುತಿದೆ.