ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ಆರಂಭಿಸಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯದ 28 ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ. 28 ಮಂದಿ ಸಚಿವರಿಗೆ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಕ್ಷೇತ್ರಗಳಲ್ಲಿ ಸಭೆ ನಡೆಸಿ
ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ ಸಲ್ಲಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿದ್ದಾರೆ. ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ. ಆಯಾ ಕ್ಷೇತ್ರಗಳಿಗೆ ನೇಮಕಗೊಂಡ ವೀಕ್ಷಕರು ತಮಗೆ ನೀಡಿರುವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಸಂಭಾವ್ಯ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.