ಸುಳ್ಯ: ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯ ಬಸ್ಸುನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ ಮಾತನಾಡಿದರು. ಕಾಂಗ್ರೆಸ್ ಪಕ್ಷದ ನಾಯಕರು, ವಿವಿಧ ಘಟಕಗಳ ಪದಾಧಿಕಾರಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ನಂತರ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ವಿಜಯೋತ್ಸವ ಆಚರಿಸಲಾಯಿತು.