ಸುಳ್ಯ: ಸುಳ್ಯದ 110 ಕೆವಿ ಸಬ್ ಸ್ಟೇಷನ್ ಕಾಮಗಾರಿಗೆ ವೇಗ ನೀಡಿ ಆದಷ್ಟು ಬೇಗ ಪೂರ್ತಿ ಮಾಡಲು ಪ್ರಯತ್ನ ನಡೆಸಬೇಕು ಎಂದು ಸುಳ್ಯದ ಕಾಂಗ್ರೆಸ್ ಮುಖಂಡರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು. ಸುಳ್ಯದ ಕಾಂಗ್ರೆಸ್ ಮುಖಂಡರಾದ
ಎಂ.ವೆಂಕಪ್ಪ ಗೌಡ, ಶಶಿಧರ್ ಎಂ ಜೆ, ಭವಾನಿ ಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ ಮತ್ತಿತರರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಪುತ್ತೂರಿನ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ ಕೂಡಲೇ ಸ್ಪಂದಿಸಿದ ಶಾಸಕರು ಕೆ. ಪಿ. ಟಿ. ಸಿ ಎಲ್ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದರು. ಸುಳ್ಯದ 110ಕೆ ವಿ ಸಬ್ ಸ್ಟೇಷನ್ ಕಾಮಗಾರಿಗೆ ವೇಗ ಹೆಚ್ಚಿಸಿ ಕೂಡಲೇ ಪೂರ್ತಿ ಮಾಡುವ ಕುರಿತು ಸದನದಲ್ಲಿ ವಿಚಾರ ಪ್ರಸ್ತಾಪಿಸಲಾಗುವುದು. ಅಲ್ಲದೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರ ಜೊತೆ ಚರ್ಚಿಸಿ ಕಾಮಗಾರಿ ಆದಷ್ಟು ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.