ಸುಳ್ಯ: ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಅಭಿನಂದಿಸಿ, ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ, ಕೆಪಿಸಿಸಿ ವಕ್ತಾರರಾದ ಟಿ.ಎಂ ಶಾಹೀದ್,ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ಕಿಸಾನ್ ಘಟಕದ ಅಧ್ಯಕ್ಷರಾದ ಸುರೇಶ್ ಎಂ.ಎಚ್, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಬ್ಲಾಕ್ ಕಾರ್ಯದರ್ಶಿ ಸಿದ್ದಿಕ್ ಕೊಕ್ಕೋ, ಎನ್ ಎಸ್ ಯು ಐ ಕಾರ್ಯದರ್ಶಿ ಉಬೈಸ್ ಗೂನಡ್ಕ, ಶಾಜ್ ತೆಕ್ಕಿಲ್ ಉಪಸ್ಥಿತರಿದ್ದರು.