ಸುಳ್ಯ: ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಕೊಯಿಲಾ ಗ್ರಾಮಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿದರು. ಮಡಪ್ಪಾಡಿ ಗ್ರಾಮಕ್ಕೆ ಭೇಟಿ ನೀಡಿ ಬಿರುಸಿನ ಪ್ರಚಾರ
ನಡೆಸಿ ಮತಯಾಚನೆ ಮಾಡಿದರು.ನೆಲ್ಲೂರು ಕೆಮ್ರಾಜೆ ಗ್ರಾಮಕ್ಕೆ ಭೇಟಿ ನೀಡಿ ಮತಯಾಚಿಸಿದರು. ನಾಲ್ಕೂರು ಗ್ರಾಮಕ್ಕೆ ಭೇಟಿ ಚುನಾವಣಾ ಪ್ರಚಾರ ನಡಿಸಿದರು. ಕಂದ್ರಪ್ಪಾಡಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು. ಕಾರ್ಯಕರ್ತರ ಭೇಟಿ, ಮತದಾರರ ಭೇಟಿ ಮಾಡಿ ಪ್ರಚಾರ ಮಾಡಿದರು. ಕಾರ್ಯಕರ್ತರ ಸಭೆ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಬೆಟ್ಟ ರಾಜಾರಾಮ ಭಟ್ ಮತ್ತಿತರರು ಅಭ್ಯರ್ಥಿಯ ಜೊತೆಗಿದ್ದು ಪ್ರಚಾರ ನಡೆಸಿದರು.