ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ರಾಮಕುಂಜ ಸುಳ್ಯದ ಆಸುಪಾಸಿನಲ್ಲಿ ಚುನಾವಣಾ ಪ್ರಚಾರ ನಡೆಸಿದರು.ಪ್ರಣಾಳಿಕೆ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್, ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಪ್ರಚಾರ ಸಮಿತಿ ಉಸ್ತುವಾರಿ ಎಂ ವೆಂಕಪ್ಪ ಗೌಡ, ಕೆ.ಎಂ.ಮುಸ್ತಫ, ಎಸ್.ಸಂಶುದ್ದೀನ್, ಸಿದ್ದಿಕ್ ಕೊಕ್ಕೊ, ಶರೀಫ್ ಕಂಠಿ, ಶಾಹುಲ್ ಹಮೀದ್ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.