ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಕುರಿತಂತೆ ಕಡಬ ಬ್ಲಾಕ್ನ ಕಡಬದಲ್ಲಿ ನಡೆದ ಪರಾಮರ್ಶೆ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ, ಹೋಯ್ ಕೈ ನಡೆದ ಘಟನೆ ವರದಿಯಾಗಿದೆ. ಕಡಬ ಅಂಬೇಡ್ಕರ್ ಭವನದಲ್ಲಿ ಇಂದು ಈ ಸಭೆ
ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರೆನ್ನಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಇತ್ತೀಚೆಗಷ್ಟೆ ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆಗೊಳಗಾದ ನಾಯಕರು ಈ ಸಭೆಗೆ ಆಗಮಿಸಿದ್ದ ವೇಳೆ ಕೆಲವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆನ್ನಲಾಗಿದೆ. ಈ ವೇಳೆ ಉಭಯ ತಂಡಗಳ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ ನಡೆದಿದೆ. ಪೋಲಿಸರು ಆಗಮಿಸಿ ಇತ್ತಂಡಗಳಿಗೆ ಪ್ರತ್ಯೇಕ ಸಭೆ ನಡೆಸುವಂತೆ ಸೂಚಿಸಿದರೆನ್ನಲಾಗಿದೆ.