ಸುಳ್ಯ:ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ನ. 26ರಂದು ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಅನಿಶ್ ನಾದ್ ಇ.ಎಂ. ಸಂವಿಧಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯಗಳಿಗೆ ದಾರಿದೀಪವಾಗಿದೆ. ಅದರ ಆಶಯಗಳಾದ
ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.7ನೇ ತರಗತಿಯ ವಿದ್ಯಾರ್ಥಿನಿ ಪ್ರಕೃತಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸಿದಳು. ಮನಸ್ವಿ. ಡಿ ಅವರು ಸಂವಿಧಾನದ

ಐತಿಹಾಸಿಕ ಹಿನ್ನೆಲೆ ಹಾಗೂ ಅದರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಮಹನೀಯರ ಕುರಿತು ಮಾಹಿತಿ ನೀಡಿದರು. ದೈವಿಕ್ ಚಾಂದ್ ಸಂವಿಧಾನಕ್ಕೆ ಸಂಬಂಧಿಸಿದ ರಸಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಂವಿಧಾನದ ಅರಿವು ಮೂಡಿಸಿದನು. ಏಳನೇ ತರಗತಿಯ ವಿದ್ಯಾರ್ಥಿನಿ ಟೀನಾ ನಿರೂಪಿಸಿದಳು. ಉಪಪ್ರಾಂಶುಪಾಲೆ ಶಿಲ್ಪಾ ಬಿದ್ದಪ್ಪ ಸೇರಿದಂತೆ ಶಾಲೆಯ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.















