ಸುಳ್ಯ: ಕಳೆದ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಮುಂಜಾನೆ ಹಾಗೂ ಸಂಜೆ ವೇಳೆ ಚಳಿ ಗಾಳಿ ಬೀಸುತ್ತಿದೆ. ಈಗಾಗಲೇ ಎಲ್ಲೆಡೆ ಚಳಿ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.ಜನವರಿ ವೇಳೆಗೆ ಉಷ್ಣಾಂಶ ಮತ್ತಷ್ಟು ಕುಸಿಯಲಿದ್ದು ಎಲ್ಲೆಡೆ ತೀವ್ರ ಚಳಿಗಾಲದ ಅನುಭವ ಅಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಡುತ್ತಾರೆ.ಹಗಲು ವೇಳೆ
ಮೋಡ ಕವಿದ ವಾತವರಣ, ಸಂಜೆಯ ತನಕ ಬಿಸಿಲಿದ್ದರೂ ಚಳಿಯ ಅನುಭವ ಹೆಚ್ಚಾಗುತ್ತಿದೆ. ಸುಳ್ಯ ತಾಲೀಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಚಳಿಯ ವಾತಾವರಣ ಇದೆ. ಬೆಳಗ್ಗಿನ ಜಾವ ಎಲ್ಲೆಡೆ ಮಂಜು ಮುಸುಕಿದ ವಾತಾವರಣ ಕಂಡು ಬಂದಿದೆ.
ಇನ್ನು ಡಿಸೆಂಬರ್ 17ರಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರವಾಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜತೆಗೆ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ ಹಾಗೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಸೂಚನೆ ಇದೆ.












