ಮಡಿಕೇರಿ: ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯ ಗಳಿಸಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿಯ ಕೆ.ಜಿ.ಬೋಪಯ್ಯ 79,500, ಕಾಂಗ್ರೆಸ್ ಎ.ಎಸ್.ಪೊನ್ನಣ್ಣ 83,791 ಮತಗಳನ್ನು ಪಡೆದಿದ್ದು ಒಟ್ಟು 4,291ಮತಗಳ ಗೆಲುವನ್ನು ಕಾಂಗ್ರೆಸ್ ಸಾಧಿಸಿದೆ.
ಮಡಿಕೇರಿ ಕ್ಷೇತ್ರದಲ್ಲಿ 20ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ನ ಮಂತರ್ ಗೌಡ , 83,949, ಬಿಜೆಪಿಯ ಎಂ.ಪಿ.ಅಪ್ಪಚ್ಷುರಂಜನ್ 79,249 ಮತಗಳಿಸಿದ್ದಾರೆ. ಕಾಂಗ್ರೆಸ್ 4,700ಮತಗಳ ಮುನ್ನಡೆ ಪಡೆದು ಗೆಲುವು ಸಾಧಿಸಿದೆ.