ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಜನವಸತಿ ಪ್ರದೇಶಗಳತ್ತ ಪದೇ ಪದೇ ದಾಳಿ ನಡೆಸುತ್ತಿದ್ದ ಕಾಡಾನೆಯನ್ನು ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದರು.30 ವರ್ಷದ ಈ ಗಂಡಾನೆ ಸೆರೆಗೆ
ಮತ್ತಿಗೋಡು ದುಬಾರೆ ಸಾಕಾನೆಗಳ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆ ಸೆರೆ ಹಿಡಿಯಲಾಯಿತು. ವಿರಾಜಪೇಟೆ ತಾಲ್ಲೂಕಿನ
ಕರಡಿಗೋಡು ಚಕ್ಕನಳ್ಳಿ ಕಾಫಿತೋಟದಲ್ಲಿ ಕಾಡಾನೆ ಪತ್ತೆಯಾಗಿತ್ತು. ಮಾಲ್ದಾರೆ ಅರಣ್ಯ ಪ್ರದೇಶದ ಗಡಿಯಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದರು. ಸಿದ್ಧಾಪುರ ಭಾಗದಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆಗೆ ಸರಕಾರ ಆದೇಶ ನೀಡಿತ್ತು.