ಮಡಿಕೇರಿ: ಕೊಡಗಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಭಾಗಮಂಡಲದಲ್ಲಿ 21 ಸೆಂ.ಮೀನಷ್ಟು ಭಾರಿ ಮಳೆ ಸುರಿದಿದೆ. ಇದರಿಂದ ಈಗಾಗಲೇ
ಭರ್ತಿಯಾಗಿರುವ ತ್ರಿವೇಣಿ ಸಂಗಮದಲ್ಲಿ ನೀರು ಮತ್ತಷ್ಟು ಏರಿಕೆಯಾಗಿದೆ. ಕಾವೇರಿ ಮತ್ತು ಕನ್ನಿಕೆ ನದಿಗಳು ತುಂಬಿ ಹರಿಯುತಿದೆ.
ಮಡಿಕೇರಿ, ಸಂಪಾಜೆ, ನಾಪೋಕ್ಲು ಪೊನ್ನಂಪೇಟೆ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗಿದೆ. ದಟ್ಟ ಮೋಡಕವಿದ ವಾತಾವರಣ ಇದೆ