ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಏರಿದ ಉಷ್ಣಾಂಶ ಹಾಗೂ ವಿಪರೀತ ಸೆಕೆಯಿಂದ ಬಸವಳಿದಿದ್ದ ಜನತೆಗೆ ಮಳೆ ತಂಪೆರೆದಿದ್ದು ಜನರನ್ನು ಕೊಂಚ ನಿರಾಳರಾಗುವಂತೆ ಮಾಡಿದೆ. ಭಾಗಮಂಡಲದಲ್ಲಿ ವರ್ಷದ ಮೊದಲ ಮಳೆ ಇಂದು ಸುರಿಯಿತು. ಚೇರಂಬಾಣೆ, ನಾಪೋಕ್ಲು, ಎಮ್ಮೆಮಾಡು, ನೆಲಜಿ, ಕಾರುಗುಂದ, ಕಡಿಯತ್ತೂರು ಸುತ್ತಮುತ್ತಲ ಗ್ರಾಮಗಳಲ್ಲಿ
ಸಾಧಾರಣ ಮಳೆಯಾಗಿದೆ.ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ತಾಪಮಾನ ಏರಿಕೆಯಾಗಿತ್ತು. ರಾಜ್ಯದ ವಿವಿಧೆಡೆ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ,
ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹೇಳಿದೆ.