ಮಡಿಕೇರಿ: ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಸೋಮವಾರ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ
ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲ ಝಳಕ್ಕೆ ಕಂಗೆಟ್ಟಿದ್ದ ಭುವಿಗೆ ತಂಪೆರೆದಿದೆ. ಕಳೆದ ವಾರ ಕೊಡಗಿನ ಮೂರ್ನಾಡು ಮತ್ತಿತರ ಕಡೆ ಮಳೆಯಾಗಿತ್ತು.ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ

ಕೊಡಗಿನಲ್ಲಿ ಸುರಿದ ಮಳೆ
ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ.ರಾಜ್ಯದ ಒಳನಾಡು ಭಾಗದಲ್ಲಿ ಮಂಗಳವಾರ ಮತ್ತು ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಾರ್ಚ್ 20ರ ಬೆಳಗ್ಗೆ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಚಿಕ್ಕಮಗಳೂರು ಬೀದರ್ನಲ್ಲಿ ಭಾನುವಾರ 4 ಸೆಂ.ಮೀ ಮಳೆ ಸುರಿದು ತಂಪೆರೆದಿತ್ತು.









