ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿ(ಪಿಯುಸಿ)ಗೆ ಜುಲೈ.19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ವರುಣನ
ಆರ್ಭಟ ಮುಂದುವರೆದು ನದಿ, ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯಾದ್ಯಂತ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.