ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯದಲ್ಲಿ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆ ವತಿಯಿಂದ ಸುಳ್ಯ ನಗರದಲ್ಲಿ ಪಥ ಸಂಚಲನ ನಡೆಯಿತು. ಸುಳ್ಯ ಜ್ಯೋತಿ ವೃತ್ತದಿಂದ ಆರಂಭಗೊಂಡ ಪಥ ಸಂಚಲನ ಗಾಂಧೀನಗರ ತನಕ ಸಾಗಿ ಅಲ್ಲಿಂದ ಹಿಂತಿರುಗಿ

ಪೊಲೀಸ್ ಠಾಣಾ ಮುಂಭಾಗದಲ್ಲಿ ಸಮಾಪನಗೊಂಡಿತು. ಸಿಆರ್ಪಿಎಫ್ ಇನ್ಸ್ಪೆಕ್ಟರ್ ಎ.ಕೆ. ತಿವಾರಿ ನೇತೃತ್ವದ 32 ಮಂದಿ ಸಿಆರ್ಪಿಎಫ್ ಪಡೆ, ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಈರಯ್ಯ, ದೂಂತೂರು, ಸರಸ್ವತಿ ಹಾಗೂ ಸಿಬ್ಬಂದಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಚುನಾವಣೆಯ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ಪಡಗಳನ್ನು ನಿಯೋಜಿಸಲಾಗುತ್ತದೆ. ಗಡಿಗಳಲ್ಲಿ ತಪಾಸಣೆಗೆ, ಬೂತ್ಗಳಲ್ಲಿ ಭದ್ರತೆಗೆ ಪೊಲೀಸರ ಜೊತೆಗೆ ಸಿಆರ್ಪಿಎಫ್ ಪಡೆಗಳನ್ನು ನಿಯೋಜಿಸಲಾಗುತ್ತದೆ.










