ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ತನ್ನ 2ನೇ ಪಂದ್ಯದಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಗುಜರಾತ್ ಟೈಟಾನ್ಸ್ ವಿರುದ್ಧ 63 ರನ್ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.ರಚಿನ್ ರವಿಂದ್ರ 20 ಎಸೆತಗಳಲ್ಲಿ 46 ರನ್, ಅಜಿಂಕ್ಯ ರಹಾನೆ 12, ರುತುರಾಜ್ ಗಾಯಕ್ವಾಡ್ 46 ರನ್ಗಳ
ಕೊಡುಗೆ ನೀಡಿದರೆ,
ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 23 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 51 ರನ್ ಚಚ್ಚಿದರು. 207 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಕಲೆಹಾಕಲಷ್ಟೇ ಶಕ್ತರಾದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು 63 ರನ್ಗಳ ಭರ್ಜರಿ ಜಯ ಸಾಧಿಸಿತು.ನಾಯಕ ಶುಭ್ಮನ್ ಗಿಲ್ ಕೇವಲ 8 ರನ್ಗಳಿಸಿ ಔಟಾದರೆ, ವೃದ್ದಿಮಾನ್ ಸಾಹ 21 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ವಿಜಯ್ ಶಂಕರ್ 12 ರನ್ಗಳಿಸಿ ನಿರ್ಗಮಿಸಿದರೆ, ಡೇವಿಡ್ ಮಿಲ್ಲರ್ 21 ರನ್ಗಳಿಸಿ ಹೊರ ನಡೆದರು.ಈ ಹಂತದಲ್ಲಿ ಸಾಯಿ ಸುದರ್ಶನ್ (31) ಹಾಗೂ ಒಮರ್ಝಾಹಿ (11) ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಶೀದ್ ಖಾನ್ 1 ರನ್ಗಳಿಸಿ ಪೆವಿಲಿಯನ್ಗೆ ಹಿಂತಿರುಗಿದರು.
ಸಿಎಸ್ಕೆ ಪರ ತುಷಾರ್ ದೇಶಪಾಂಡೆ, ಮುಸ್ತಫಿಜುರ್ ರೆಹಮಾನ್ ಹಾಗೂ ದೀಪಕ್ ಚಹರ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.