ಚೆನ್ನೈ: ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 4 ವಿಕೆಟ್ಗಳ ಜಯ ದಾಖಲಿಸಿದೆ. ತಲಾ ಐದು ಸಲ ಪ್ರಶಸ್ತಿ ಜಯಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದು ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮುಂಬೈ ಇಂಡಿಯನ್ಸ್ ಮೊದಲು
ಬ್ಯಾಟಿಂಗ್ ಮಾಡಿ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 155 ರನ್ ಪೇರಿಸಿತು. ಗುರಿ ಬೆನ್ನಟ್ಟಿದ ಚೆನ್ನೈ19.1 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಗೆಲುವಿನ ನಗೆ ಬೀರಿತು
ಚೆನ್ನೈ ಪರ ರಚಿನ್ ರವೀಂದ್ರ ಹಾಗೂ ನಾಯಕ ಋತುರಾಜ್ ಗಾಯಕ್ವಾಡ್ ಅರ್ಧ ಶತಕ ಗಳಿಸಿದರು. ರಚಿನ್ 45 ಎಸೆತಗಳಲ್ಲಿ 2 ಬೌಂಡರಿ, 4 ಸಿಕ್ಸರ್ ನೆರವಿನಿಂದ ಅಜೇಯ 65 ರನ್, ಗಾಯಕ್ವಾಡ್ 26 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು.ಮುಂಬೈ ಪರ ಸೂರ್ಯ ಕುಮಾರ್ ಯಾದವ್ 29, ತಿಲಕ್ ವರ್ಮಾ 33 ಹಾಗೂ ದೀಪಕ್ ಚಹಾರ್ 28 ರನ್ಗಳಿಸಿದರು. ಚೆನ್ನೈ ಪರ ನೂರ್ ಅಹಮ್ಮದ್ 4, ಖಲೀಲ್ ಅಹಮ್ಮದ್ 3 ವಿಕೆಟ್ ಪಡೆದರು.