ಗ್ಲಾಸ್ಗೊ: ಭಾರತದ ಗುಲ್ವೀರ್ ಸಿಂಗ್ ಅವರು ಕಾಮನ್ವೆಲ್ತ್ ಕ್ರೀಡಾಕೂಟದ ಪುರುಷರ 10 ಸಾವಿರ ಮಿ.ಓಟದ ಫೈನಲ್ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿದ್ದಾರೆ.ಈ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಗುಲ್ವೀರ್ ಸಿಂಗ್ ಅವರು
27 ನಿಮಿಷ 49.78 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.27 ನಿಮಿಷ 48.93 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಆಸ್ಟ್ರೇಲಿಯಾದ ಕೈ ರಾಬಿನ್ಸನ್ ಚಿನ್ನದ ಪದಕ ಗೆದ್ದು ಬೀಗಿದರು. ಡೇವಿಡ್ ಮುಲ್ಲಾರ್ಕಿ ಕಂಚಿನ ಪದಕ ಪಡೆದರು.ಭಾರತದ ಹರ್ಜಿಂದರ್ ಕೌರ್ ಅವರು ಮಹಿಳೆಯರ 69 ಕೆ.ಜಿ. ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹರ್ಜಿಂದರ್ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಏಳನೇ ಪದಕ ತಂದುಕೊಟ್ಟಿದ್ದಾರೆ.ಕೆನಡಾದ ಶಾರ್ಲೆಟ್ ಸಿಮೋನ್ಯು ಚಿನ್ನ ಗೆದ್ದರು.









