ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಧಿಕೃತವಾಗಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಡಿ.ಕೆ. ಶಿವಕುಮಾರ್ ಅವರಿಗೆ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು.
ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ,ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್, ಸಚಿವರಾಗಿ ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್,ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ,ಸತೀಶ ಜಾರಕಿಹೊಳಿ,ಕೃಷ್ಣಬೈರೇಗೌಡ
ಪ್ರಿಯಾಂಕ್ ಖರ್ಗೆ,ಯು.ಟಿ. ಖಾದರ್,ಈಶ್ವರ್ ಖಂಡ್ರೆ,ಯತೀಂದ್ರ ಸಿದ್ದರಾಮಯ್ಯ,ಬೈರತಿ ಸುರೇಶ್,ಶರಣ ಪ್ರಕಾಶ ಪಾಟೀಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೇರಳಂ ಮುಖ್ಯಮಂತ್ರಿ ವಿ.ಡಿ.ಸತೀಶನ್, ತೆಲಂಗಾನ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು,ಮಾಜಿ ಮುಖ್ಯಮಂತ್ರಿಗಳು, ಉದ್ಯಮಿಗಳು ಸೇರಿದಂತೆ ಅನೇಕರು ಪದಗ್ರಹಣಕ್ಕೆ ಸಾಕ್ಷಿಯಾದರು.














