ಧರ್ಮಸ್ಥಳ: ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಏ.20 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.ಕ್ಷೇತ್ರಕ್ಕೆ ಆಗಮಿಸಿದ

ಶಿವಕುಮಾರ್ ಅವರನ್ನು ಡಿ.ಸುರೇಂದ್ರ ಕುಮಾರ್ ಸ್ವಾಗತಿಸಿದರು. ಡಿಸಿಎಂ ಜತೆ ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್ ಹಾಗು ಮತ್ತಿತರರು ಉಪಸ್ಥಿತರಿದ್ದರು. ಎ.19ರಂದು ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ಡಿ.ಕೆ.ಶಿವಕುಮಾರ್ ಎ.20ರಂದು ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, ಕನ್ಯಾಡಿ ಶ್ರೀರಾಮ ಮಂದಿರ ಭೇಟಿ, ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
