ಅಹಮ್ಮದಾಬಾದ್: ಗುಜರಾತ್ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿರುವ
ಅನಂತನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಹಲವು ಭಾಷೆಗಳ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಡಾ. ರಾಜ್ಕುಮಾರ್ ಅವರ ಬಳಿಕ ಈ ಅತ್ಯುನ್ನತ ಗೌರವಕ್ಕೆ ಭಾಜನರಾದ ಮತ್ತೊಬ್ಬ ಕನ್ನಡಿಗ ಎಂಬ ಕೀರ್ತಿಗೂ ಅನಂತ್ ನಾಗ್ ಪಾತ್ರರಾಗಿದ್ದಾರೆ. 2024ನೇ ಸಾಲಿನ ಈ ಗೌರವಕ್ಕೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಭ್ರಮಯುಗಂ ಚಿತ್ರದ ಅಭಿನಯಕ್ಕಾಗಿ ಮಲಯಾಳಂ ನಟ ಮಮ್ಮುಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಚಂದು ಚಾಂಪಿಯನ್ ಚಿತ್ರಕ್ಕಾಗಿ ನಟ ಕಾರ್ತಿಕ್ ಆರ್ಯನ್ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಆರ್ಟಿಕಲ್ 370′ ಚಿತ್ರಕ್ಕಾಗಿ ಯಾಮಿ ಗೌತಮ್ ಧರ್ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು. ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಧನುಷ್ ಅವರಿಗೆ ‘ಅತ್ಯುತ್ತಮ ನಟ’,(ಸ್ಪೆಷಲ್ ಜುರಿ), ಶಾಶ್ವತ್ ಸಚ್ದೇವ್ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ, ರಣದೀಪ್ ಹೂಡಾ ಅವರು ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ,ಆರ್ಟಿಕಲ್ 370’ ಚಿತ್ರಕ್ಕಾಗಿ ನಿರ್ಮಾಪಕ ಆದಿತ್ಯ ಧರ್ ಅವರಿಗೆ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿ, ವೈಕಂ ವಿಜಯಲಕ್ಷ್ಮಿ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿ ಸ್ವೀಕರಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಇತರರು.






