ಸುಳ್ಯ:ಬೆಳ್ಳಾರೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಉಪನ್ಯಾಸಕ ದಾಮೋದರ ಕಣಜಾಲು ನೇಮಕಗೊಂಡಿದ್ದಾರೆ. ಚಿಕ್ಕಮಗಳೂರು ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಜ್ಯ ಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿರುವ ದಾಮೋದರ ಕಣಜಾಲು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗು ಮುಂದಿನ
ಆದೇಶದವರೆಗೆ ಬೆಳ್ಳಾರೆ ಡಾ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಅನ್ಯ ಕಛೇರಿ ಕರ್ತವ್ಯದ ಮೇರೆಗೆ ನಿಯೋಜನೆ ಮಾಡಿ ಕಾರ್ಯನಿರ್ವಹಿಸಲು ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸೋಮವಾರ ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಕರ್ತವ್ಯ ವಹಿಸಿಕೊಳ್ಳುವುದಾಗಿ ದಾಮೋದರ ಕಣಜಾಲು ತಿಳಿಸಿದ್ದಾರೆ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗು ಪ್ರಭಾರ ಪ್ರಾಂಶುಪಾಲರಾಗಿದ್ದ ಸುಳ್ಯ ತಾಲೂಕಿನ ಕನಕಮಜಲಿನ ದಾಮೋದರ ಕಣಜಾಲು ಕೆಲವು ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯ ಯಲಬುರ್ಗ ಕಾಲೇಜಿಗೆ ವರ್ಗಾವಣೆಯಾಗಿದ್ದರು. ಬಳಿಕ ಚಿಕ್ಕಮಗಳೂರು ಸರಕಾರಿ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು.