ಸುಳ್ಯ: ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಶ್ರೀ ಶಾರದಾಂಬಾ ವೇದಿಕೆಯಲ್ಲಿ
ವಿಜಯದಶಮಿ ದಿನವಾದ ಇಂದು ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಬೆಳಿಗ್ಗೆ 6.22ರಿಂದ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಅಕ್ಷರಾಭ್ಯಾಸ ನಡೆಸಲಾಯಿತು. ನೂರಕ್ಕೂ ಹೆಚ್ಚು ಪುಟಾಣಿಗಳು ವಿದ್ಯಾ ದೇವತೆ ಶಾರದಾ ದೇವಿಯ ಮುಂದೆ ಜ್ಞಾನದ ಮೊದಲ ಅಕ್ಷರ ಬರೆದರು. ಶ್ರೀ ಶಾರದಾಂಬಾ, ದಸರಾ ಸಮೂಹ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.









