ಸುಳ್ಯ: ಶ್ರೀ ದೇವಿಯ ಆರಾಧನೆ ಮತ್ತು ನಮ್ನ ಧಾರ್ಮಿಕ ಉತ್ಸವಗಳ ಆಚರಣೆಯಿಂದ ಬದುಕಿನಲ್ಲಿ ನೆಮ್ಮದಿ ಮತ್ತು ಉನ್ನತಿ ದೊರೆಯಲು ಸಾಧ್ಯ ಎಂದು ಬಂದರು ಮೀನುಗಾರಿಕೆ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಸುಳ್ಯ ತಾಲೂಕು ದಸರ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ

51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೊಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಮ್ಮ ಶ್ರಮದ ಮೂಲಕ ಆರ್ಥಿಕ ಸದೃಢತೆಯನ್ನು ಪಡೆದುಕೊಳ್ಳಬೇಕು ಎಂದ ಅವರು ನಮ್ಮ ಕಲೆ, ಸಂಸ್ಕೃತಿಗಳ ಮೂಲಕ ಜೀವನದಲ್ಲಿ ಸಂತೋಷವನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ‘ಸಹಕಾರಿ ರತ್ನ’ ಪ್ರಶಸ್ತಿ ಪುರಸ್ಕೃತರಾದ ಕೆ.ಸೀತಾರಾಮ ರೈ ಸವಣೂರು, ಯುವ ಉದ್ಯಮಿ ಜಿತೇಂದ್ರ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸಾರ್ವಜನಿಕ ಶ್ರೀ ಶಾರದಾಂಬಾ ಉತ್ಸವ ಸಮಿತಿಯ ಲಾಂಛನವನ್ನು ಸಚಿವ ಅಂಗಾರ ಬಿಡುಗಡೆ ಮಾಡಿದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವ ಸಲಹೆಗಾರರಾದ ಡಾ.ಲೀಲಾಧರ್ ಡಿ.ವಿ. ಮಾತನಾಡಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್,
ಅಧ್ಯಕ್ಷ ಚಿದಾನಂದ ವಿದ್ಯಾನಗರ, ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಅಧ್ಯಕ್ಷ ನವೀನ್‌ಚಂದ್ರ ಕೆ.ಎಸ್, ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಹರೀಶ್ ರೈ ಉಬರಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುರೋಹಿತ ನಾಗರಾಜ ಭಟ್ ಪ್ರಾರ್ಥಿಸಿದರು. ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ನಾರಾಯಣ ಕೇಕಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್ ವರದಿ ವಾಚಿಸಿ, ಲಾಂಛನದ ಬಗ್ಗೆ ವಿವರ ನೀಡಿದರು. ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ವಂದಿಸಿದರು. ಪತ್ರಕರ್ತ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.