ಪಂಜ: ಸುಳ್ಯ ತಾಲೂಕು ದಸರಾ ಕ್ರೀಡಾಕೂಟ ಇಂದು ಪಂಜದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಪಂಜ, ಯುವಜನ ಸಂಯುಕ್ತ
ಮಂಡಳಿ ಸುಳ್ಯ, ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪಂಜ ಸರರಕಾರಿ ಪದವಿ ಪೂರ್ವ ಕಾಲೇಜಿನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ದೀಪ ಬೆಳಗಿಸಿ ಕ್ರೀಡಾಕೂಟದ ಉದ್ಘಾಟಿಸಿ ಶುಭ ಹಾರೈಸಿದರು. ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಬಿ.ಕೆ.ಮಾಧವ ಮತ್ತಿತರರು ಉಪಸ್ಥಿತರಿದ್ದರು