ಸುಳ್ಯ:ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಮತ್ತು ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜು. 20ರಂದು ಸುಳ್ಯದ ಬೂಡು ಶ್ರೀ ಭಗವತಿ ದೇವಸ್ಥಾನದ ಮುಂಭಾಗದ ಗದ್ದೆಯಲ್ಲಿ ಕೇಸರ್ಡ್ ಒಂಜಿ ದಿನ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ.ಶಾರದಾಂಬ ಸಮೂಹ ಸಂಸ್ಥೆ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ರೋಟರಿ ಸುಳ್ಯ ಸಿಟಿ ಕ್ಲಬ್, ಭಗವತಿ ಯುವ ಸೇವಾ ಸಂಘ, ಸುಳ್ಯ ತಾಲೂಕು ಬಂಟರ ಸಂಘ, ಪಯಸ್ವಿನಿ ಯುವಕ ಮಂಡಲ, ಹಾಗೂ
ಇತರ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೂಡು ಗದ್ದೆಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳು, ಮತ್ತು ಮನರಂಜನ ಸ್ಪರ್ಧೆಗಳೊಂದಿಗೆ ನಡೆಯಲಿದೆ. ಇದರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು
ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ವಹಿಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿವರಿಸಿದರು. ಸಮಿತಿಯ ಗೌರವಾಧ್ಯಕ್ಷ ಗೋಕುಲ್ ದಾಸ್, ರೋಟರಿ ಕ್ಲಬ್ ಅಧ್ಯಕ್ಷ ರಾಮ್ ಮೋಹನ್ , ಲಯನ್ಸ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಮಾತನಾಡಿದರು. ಗೌರವ ಸಲಹೆಗಾರ ಎನ್ ಜಯಪ್ರಕಾಶ್ ರೈ ಸಲಹೆ ಸೂಚನೆ ನೀಡಿದರು.
ಶಾರದಾಂಬ ಸೇವಾ ಸಮಿತಿ ಕೋಶಾಧಿಕಾರಿ ಅಶೋಕ್ ಪ್ರಭು, ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ಶಾರದಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನಿಲ್ ಕೇರ್ಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಸರಾ ಸಮೂಹ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾರದಾಂಬ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ ಕಾರ್ಯಕ್ರಮ ನಿರೂಪಿಸಿದರು. ದಸರಾ ಉತ್ಸವ ಸಮಿತಿ ಕೋಶಾಧಿಕಾರಿ ಸುನಿಲ್ ಕೇರ್ಪಳ ವಂದಿಸಿದರು.














