ಸುಳ್ಯ:ಉತ್ಸವಗಳು ಉತ್ಸಾಹ ಆಗದೆ ನಿಜವಾದ ಉತ್ಸವವಾಗಿ, ನಾಡಹಬ್ಬವಾಗಿ ಬೆಳಗಬೇಕು. ಸುಳ್ಯದಲ್ಲಿ ಶಾರದಾ ಉತ್ಸವವು ನಿಜವಾದ ಉತ್ಸವವಾಗಿ, ನಾಡಹಬ್ಬವಾಗಿ ಮಾರ್ಪಾಡಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ
ಶಾರದಾಂಬಾ ಕಲಾ ವೇದಿಕೆಯಲ್ಲಿ ನಡೆದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ‘ಸುಳ್ಯ ದಸರಾ’ದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಇಡೀ ಸಮಾಜವನ್ನು ಒಟ್ಟುಗೂಡಿಸುವ ಶಕ್ತಿ ನಮ್ಮ ಆಚರಣೆಗಳಿಗೆ ಇದೆ.ದೇವರ ಮುಂದೆ ನಿಂತಾಗ ಜಾತಿ, ಪಕ್ಷವನ್ನು ಮೀರಿ ಒಂದಾಗಬೇಕು.ಸುಳ್ಯದ ಶಾರದಾ ಉತ್ಸವ ಜಾತಿ, ಪಕ್ಷವನ್ನು ಮೀರಿ ನಿಂತಿದೆ. ನಿಜವಾದ ವಸುದೈವ ಕುಟುಂಬಕಂ ಇಲ್ಲಿ ಸಾಕಾರವಾಗಿದೆ. ಶಾರದೋತ್ಸವ ಹೇಗಿರಬೇಕು ಎಂಬ ಸಂದೇಶ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪರಿಸರ ತಜ್ಞ, ಗ್ರೀನ್ ಹೀರೋ ಆಫ್ ಇಂಡಿಯಾ ಡಾ.ಆರ್.ಕೆ.ನಾಯರ್ ಮಾತನಾಡಿ ಆಚರಣೆಗಳು ಮನರಂಜನೆ ಆಗುವ ಇಂದಿನ ಸಂದರ್ಭದಲ್ಲಿ ಸುಳ್ಯದಲ್ಲಿ ಆಚರಣೆಗಳು ನಿಜ ಅರ್ಥದಲ್ಲಿ ನಡೆಯುತಿದೆ ಎಂದು ಹೇಳಿದರು.
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಆರ್.ಕೆ.ನಾಯರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಪುತ್ತೂರು ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಅತಿಥಿಯಾಗಿದ್ದರು.
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶಾರದಾಂಬ ಉತ್ಸವ ಸಮಿತಿಯ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ.ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್

ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್,
ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿಯ ಕೋಶಾಧಿಕಾರಿ ಸುನಿಲ್ ಕೇರ್ಪಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು ಸ್ವಾಗತಿಸಿದರು.ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ ವಂದಿಸಿದರು.ಅಚ್ಚುತ ಅಟ್ಲೂರು ಹಾಗೂ ಸುಶ್ಮಿತಾ ಕಡಪಳ ಕಾರ್ಯಕ್ರಮ ನಿರೂಪಿಸಿದರು.
