ಸುಳ್ಯ:ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಹಾಗೂ ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 55ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ‘ಸುಳ್ಯ ದಸರಾ’ದ ವೈಭವದ ಶೋಭಾಯಾತ್ರೆಗೆ
ಸಂಭ್ರಮದ ಚಾಲನೆ ನೀಡಲಾಯಿತು. ಮಹಾಪೂಜೆಯಾಗಿ
ಶ್ರೀ ದೇವಿಯ ವೈಭವದ
ಶೋಭಾಯಾತ್ರೆ ಆರಂಭಗೊಂಡಿತು.ಶ್ರೀ ದೇವಿಗೆ ವಿಶೇಷ ಅಲಂಕಾರದೊಂದಿಗೆ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಂಟಪದಲ್ಲಿ ಶ್ರೀ ದೇವಿಯ ಶೋಭಾಯಾತ್ರೆ ನಡೆಯಿತು. ಚಲಿಸುವ ಸ್ತಬ್ದ ಚಿತ್ರಗಳು, ಕಿವಿಗಪ್ಪಆಸುವ ನಾಸಿಕ್ ಬ್ಯಾಂಡ್ನ ಅಬ್ಬರ, ಕೊಂಬು, ಕಹಳೆ, ವಾಲಗ, ಚೆಂಡೆ ಮೇಳ, ಶಿಂಗಾರಿ ಮೇಳ, ಅಘೋರಿ, ದೇವರೂಪಂ, ಸಿಂಗಾರ ಕಾವಡಿ, ದೇವ ನೃತ್ಯ, ದೇವ ದೇವಿಯರ ರೂಪಗಳು ಹೀಗೆ

ಹತ್ತು ಹಲವು ಆಕರ್ಷಣಿಗಳೊಂದಿಗೆ ಶೋಭಾಯಾತ್ರೆ ನೋಡುಗರ ಕಣ್ಣಿಗೆ ಹಬ್ಬವನ್ನು ನೀಡಿತು.ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಶಾರದಾ ದೇವಿಗೆ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದ ಬಳಿಕ ಶೋಭಾಯಾತ್ರೆ ಆರಂಭಗೊಂಡಿತು. ದಸರಾ ಉತ್ಸವ ಸಮಿತಿಯ ಅಧ್ಯಕ್ಷೆ, ಶಾಸಕಿ ಭಾಗೀರಥಿ ಮುರುಳ್ಯ , ಕಾರ್ತಿಕ್ ಸದಾನಂದ ಗೌಡ ಮತ್ತು ಶಾರದಾಂಬಾ ದಸರಾ ಸಮೂಹ ಸಮಿತಿಗಳ ಪದಾಧಿಕಾರಿಗಳು ಕೇಸರಿ

ನಿಶಾನೆ ತೋರಿ ಚಾಲನೆ ನೀಡಿದರು. ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷ ಡಾ.ಲೀಲಾಧರ.ಡಿ.ವಿ.,
ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್ದಾಸ್, ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ಸೇವಾ ಸಮಿತಿಯ ಕೋಶಾಧಿಕಾರಿ ಅಶೋಕ್ ಪ್ರಭು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುತ್ತಮೊಟ್ಟೆ, ಶ್ರೀ ಶಾರದಾಂಬ

ದಸರಾ ಸೇವಾ ಟ್ರಸ್ಟ್ ಖಜಾಂಜಿ ಬೂಡು ರಾಧಾಕೃಷ್ಣ ರೈ, ಶ್ರೀ ಶಾರದಾಂಬ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್, ಕಾರ್ಯದರ್ಶಿ ಎಂ.ಕೆ. ಸತೀಶ್,ಶ್ರೀ ಶಾರದಾಂಬ ಉತ್ಸವ ಸಮಿತಿಯ ಕೋಶಾಧಿಕಾರಿ ಗಣೇಶ್ ಆಳ್ವ, ದಸರಾ ಉತ್ಸವ ಸಮಿತಿಯ ಕೋಶಾಧಿಕಾರಿ ಸುನಿಲ್ ಕೇರ್ಪಳ ಹಾಗೂ ಶಾರದಾಂಬ, ಶಾರದಾಂಬ ಮಹಿಳ ಸಮಿತಿ ಅಧ್ಯಕ್ಷೆ ಲತಾ ಮಧುಸೂದನ್ , ದಸರಾ ಸಮೂಹ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.











