ಸುಳ್ಯ:ಸುಳ್ಯ ದಸರಾ 2024ರ ಆಮಂತ್ರಣ ಪತ್ರವನ್ನು ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ದಾಸ್ ಅವರು ನೀಡಿ ಆಹ್ವಾನ ಮಾಡಲಾಯಿತು. ಸ್ಪೀಕರ್ ಅವರನ್ನು
ಬೆಂಗಳೂರಿನಲ್ಲಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಇದೇ ಸಂದರ್ಭ ಯು.ಟಿ.ಖಾದರ್ ರವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಕಾರ್ಯಕ್ರಮದ ಯಶಸ್ಸಿಗೆ ಪೂರ್ಣ ಸಹಕಾರ ನೀಡುವಂತೆ ಬಗ್ಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ಸಂಶುದ್ದೀನ್ ಇದ್ದರು.