ಸುಳ್ಯ: ಸುಳ್ಯ ತಾಲೂಕಿನ ದಾಸರಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಮುಚ್ಚುವ ಹಂತದಲ್ಲಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 17 ಮಕ್ಕಳ ಭವಿಷ್ಯ ಅತಂತ್ರವಾಗಿದೆ.ಆದುದರಿಂದ ಶಾಲೆಗೆ ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು
ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ನಿಯೋಗದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಎಂ ಜೆ, ಯುವ ಮುಖಂಡ ವಿಷ್ಣುಪ್ರಸಾದ್ ಕೆದಿಲಾಯ, ದಾಸರಬೈಲು ಶಾಲೆಯ ಎಸ್ ಡಿ ಎಂ ಸಿ ಸದಸ್ಯ ಬಾಲಕೃಷ್ಣ ಗೌಡ ಇದ್ದರು.