ಸುಳ್ಯ: ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ,ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು,ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ವಿ ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು.ಮಂಕುತಿಮ್ಮನ ಕಗ್ಗದ ವಿವರಣೆಯನ್ನು
ಖ್ಯಾತ ಯಕ್ಷಗಾನ ಅರ್ಥಧಾರಿ ವೆಂಕಟ್ರಾಮ ಭಟ್, ಗಾಯನವನ್ನು ರಚನಾ ಚಿದ್ಗಲ್ ನಡೆಸಿಕೊಟ್ಟರು.ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿ ಕಾರ್ಯದರ್ಶಿ ಹೇಮನಾಥ್ ಕೆ ವಿ, ಪಿಯು ವಿಭಾಗದ ಪ್ರಾಚಾರ್ಯರಾದ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಹಾಗೂ ಕಸಾಪ ಸುಳ್ಯ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪವನಿ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಸ್ವಾಗತಿಸಿ, ಉಪನ್ಯಾಸಕಿಯರಾದ ಸಾವಿತ್ರಿ ಕೆ, ಪ್ರೇಮಲತ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ವಂದಿಸಿದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ನಿರೂಪಿಸಿದರು.








