ಸುಳ್ಯ:ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇವರು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆಗೈದವರಿಗೆ ನೀಡುವ ವಿದ್ಯಾರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುವ ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇದರ ಪ್ರಾಂಶುಪಾಲರಾದ ದಯಾಮಣಿ ಕೆ. ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು
ಪ್ರೌಢಶಾಲಾ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮತ್ತು ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಸನ್ಮಾನಿಸಿ ಶುಭ ಹಾರೈಸಿದರು.ಸಂಘದ ನಿರ್ದೇಶಕರಾದ ಡಾ. ಸಾಯಿ ಗೀತಾ, ತಂಗಮ್ಮ ಕೆ ಎಸ್ ಶುಭಹಾರೈಸಿದರು. ಸನ್ಮಾನ ಸ್ವೀಕರಿಸಿದ ಪ್ರಾಂಶುಪಾಲರಾದ ದಯಾಮಣಿ ಕೆ ವರು ಸನ್ಮಾನವನ್ನು ಕೃತಜ್ಞತೆ ಸಲ್ಲಿಸಿದರು. ಸಂಘದ ನಿರ್ದೇಶಕರಾದ ಉಮೇಶ್ ಮಳುವೇಲು ಮತ್ತು ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಪಿ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ
ಸ್ವರ್ಣ ಕಲಾ ಎ ಎಸ್ ರವರು ಸರ್ವರನ್ನು ಸ್ವಾಗತಿಸಿ, ವಂದಿಸಿದರು. ಶ್ರೀ ಶಾರದಾ ವಿದ್ಯಾಸಂಸ್ಥೆಯ ಉಪನ್ಯಾಸಕ, ಶಿಕ್ಷಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.










