ಸುಳ್ಯ:ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು, ಇವರು ಶಿಕ್ಷಣ ಕ್ಷೇತ್ರದಲ್ಲಿ ಆತ್ಯುತ್ತಮ ಸೇವೆಗೈದಿರುವವರಿಗೆ ನೀಡುವ ವಿದ್ಯಾರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ
ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ ಇವರು ಭಾಜನರಾಗಿತ್ತಾರೆ. ಇವರಿಗೆ ಮಾ.1ರಂದು ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ರಾಜ್ಯ ಮಟ್ಟದ ಸಮಾವೇಶ ಮತ್ತು ಗಣ್ಯರಿಗೆ ಗೌರವ ಅರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಸಚಿವ ಮಧು ಎಸ್ ಬಂಗರಪ್ಪ ಇವರು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸುವರು.







