ಧರ್ಮಶಾಲಾ:ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. 211 ರನ್ಗಳ ಬೃಹತ್ ಗುರಿ ಬೆನ್ನಟ್ಟಿ ಗೆದ್ದ ಡೆಲ್ಲಿ, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ಪಂಜಾಬ್ ಕಿಂಗ್ಸ್ ಸತತ ನಾಲ್ಕನೇ ಸೋಲಿಗೆ ಶರಣಾಗಿದೆ. ಮೊದಲು ಬ್ಯಾಟ್ ಮಾಡಿದ ಪಂಜಾಬ್ 211 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ
ಡೆಲ್ಲಿ 19 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿ 3 ವಿಕೆಟ್ಗಳ ದಾಖಲೆಯ ಜಯ ದಾಖಲಿಸಿತು.ಬ್ಯಾಟಿಂಗ್ನಲ್ಲಿ ಮಿಂಚಿದ ಅಕ್ಷರ್ ಪಟೇಲ್(56) ಹಾಗೂ ಡೇವಿಡ್ ಮಿಲ್ಲರ್(51) ಅರ್ಧ ಶತಕ ದಾಖಲಿಸಿ ತಂಡವನ್ನು ಜಯದ ಸನಿಹಕ್ಕೆ ತಂದರು. ಆದಾಗ್ಯೂ ಇವರಿಬ್ಬರು ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ವಿಫಲರಾದರು. ಆದರೆ ಕೆಳಕ್ರಮಾಂಕದಲ್ಲಿ ಜೊತೆಯಾದ ಆಶುತೋಷ್ ಶರ್ಮಾ(28) ಹಾಗೂ ಮಾಧವ್ ತಿವಾರಿ(18) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಇವರಿಬ್ಬರ ಜೊತೆಗೆ ಆಕಿಬ್ ನಬಿ ಕೂಡ ಅಜೇಯ 10 ರನ್ ಬಾರಿಸಿ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡದ ಪರ ಪ್ರಿಯಾಂಶ್ 33 ಎಸೆತಗಳಲ್ಲಿ 56 ರನ್ ಗಳಿಸಿದರು. ಈ ಇನ್ನಿಂಗ್ಸ್ನಲ್ಲಿ ಪ್ರಿಯಾಂಶ್ 6 ಸಿಕ್ಸರ್ಗಳು ಮತ್ತು 2 ಬೌಂಡರಿಗಳನ್ನು ಬಾರಿಸಿದರು. ನಾಯಕನ ಇನ್ನಿಂಗ್ಸ್ ಆಡಿದ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 59 ರನ್ ಗಳಿಸಿ ಅಜೇಯರಾಗುಳಿದರು. ಶ್ರೇಯಸ್ 3 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು. ಕೂಪರ್ ಕೊನೊಲಿ 27 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿಗಳೊಂದಿಗೆ 38 ರನ್ ಬಾರಿಸಿದರು. ದೆಹಲಿ ಪರ ಮಿಚೆಲ್ ಸ್ಟಾರ್ಕ್ ಮತ್ತು ಮಾಧವ್ ತಿವಾರಿ ತಲಾ 2 ವಿಕೆಟ್ ಪಡೆದರು. ಮುಖೇಶ್ ಕುಮಾರ್ 1 ವಿಕೆಟ್ ಪಡೆದರು.











