ನವದೆಹಲಿ:ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದೆ.
ಲರಾಜಸ್ಥಾನ್ ನೀಡಿದ್ದ 194 ರನ್ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇನ್ನು 4 ಎಸೆತಗಳು ಬಾಕಿ ಇರುವಂತೆಯೇ 19.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಸೋಲಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡದ
ಪ್ಲೇಆಫ್ಸ್ ಹಾದಿ ಕಠಿಣಗೊಂಡಿದೆ.194 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಲು ಕಣಕ್ಕಿಳಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನಾಯಕ ಕೆಎಲ್ ರಾಹುಲ್ ಮತ್ತು ಯುವ ಆರಂಭಿಕ ಆಟಗಾರ ಅಭಿಷೇಕ್ ಪೋರೆಲ್ ಸ್ಪೋಟಕ ಆರಂಭ ಒದಗಿಸಿದರು. ಕೆಎಲ್ ರಾಹುಲ್ ಕೇವಲ 42 ಎಸೆತಗಳಲ್ಲಿ 56 ರನ್ ಚಚ್ಚಿದರೆ,ಅಭಿಷೇಕ್ ಪೋರೆಲ್ ಕೇವಲ 31 ಎಸೆತಗಳಲ್ಲಿ 51 ರನ್ ಸಿಡಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 193 ರನ್ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಆರಂಭದಲ್ಲಿ ಯಶಸ್ವಿ ಜೈಸ್ವಾಲ್ (1) ಔಟಾದರೂ, ವೈಭವ್ ಸೂರ್ಯವಂಶಿ ಕೇವಲ 21 ಎಸೆತಗಳಲ್ಲಿ 46 ರನ್ ಚಚ್ಚಿದರು.ಮಧ್ಯಮ ಕ್ರಮಾಂಕದಲ್ಲಿ ಧ್ರುವ್ ಜುರೆಲ್ (53 ರನ್, 40 ಎಸೆತ) ಮತ್ತು ರಿಯಾನ್ ಪರಾಗ್ (51 ರನ್, 26 ಎಸೆತ) ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದರು. ರಾಜಸ್ಥಾನ್ ತಂಡವು ಒಂದು ಹಂತದಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ 220 ರನ್ಗಳತ್ತ ಮುನ್ನುಗ್ಗುತ್ತಿತ್ತು. ಆದರೆ, 16ನೇ ಓವರ್ನಲ್ಲಿ ಡೆಲ್ಲಿಯ ಸ್ಟಾರ್ ವೇಗಿ ಮಿಚೆಲ್ ಸ್ಟಾರ್ಕ್ ಒಂದೇ ಓವರ್ನಲ್ಲಿ 3 ವಿಕೆಟ್ ಕಬಳಿಸಿ ಪಂದ್ಯಕ್ಕೆ ಟ್ವಿಸ್ಟ್ ನೀಡಿದರು. ಒಟ್ಟು 4 ವಿಕೆಟ್ (4/40) ಪಡೆದ ಸ್ಟಾರ್ಕ್ ರಾಜಸ್ಥಾನಿಗಳನ್ನು 193 ರನ್ಗಳಿಗೆ ಕಟ್ಟಿಹಾಕಿದರು. ಡೆಲ್ಲಿ ಪರ ಯುವ ಬೌಲರ್ ಮಾಧವ್ ತಿವಾರಿ ಕೂಡ 27 ರನ್ ನೀಡಿ 2 ವಿಕೆಟ್ ಗಳಿಸಿದರು.














