ಕಡಬ:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲ ಎಂಬಲ್ಲಿ ಸೋಮವಾರ ಬೆಳಗ್ಗೆ ಕಾಡಾನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಘಟನಾ ಸ್ಥಳಕ್ಕೆ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹಾಗೂ ಡಿಎಫ್ಒ ಡಾ.ವೈ.ಕೆ.ದಿನೇಶ್ ಕುಮಾರ್ ಅವರು ಭೇಟಿ ನೀಡಿ ಸ್ಥಳೀಯರ ಅಹವಾಲು ಆಲಿಸಿದರು.ಸ್ಥಳಕ್ಕೆ ಡಿಸಿ ಹಾಗೂ ಡಿಎಫ್ಒ ಭೇಟಿ ನೀಡಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಈ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಡಿಎಫ್ಒ ಹಾಗೂ ಡಿಸಿ ಭೇಟಿ ನೀಡಿ ಘಟನಾ ಸ್ಥಳ
ಪರಿಶೀಲನೆ ನಡೆಸಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಮೃತ ಯುವತಿಯ ಮನೆಗೆ ತೆರಳಿ ಮನೆಯವರಿಗೆ ಸಾಂತ್ವನ ತಿಳಿಸಿದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ರವಿಕುಮಾರ್, ಇಲ್ಲಿನ ಕಾಡಾನೆ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಕೈಗೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ,ಮೃತ ಇಬ್ಬರ ಮನೆಯವರಿಗೆ ನೀಡಲಾಗುವುದು ಎಂದರು.
ಘಟನಾ ಸ್ಥಳದಲ್ಲಿ ಬೆಳಗ್ಗೆಯಿಂದಲೇ ಬಾರೀ ಸಂಖ್ಯೆಯ ಜನರು ಸೇರಿದ್ದರು.
ಎಸಿ ಗಿರೀಶ್ ನಂದನ್, ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ್, ಎಸಿಎಫ್ ಪ್ರವೀಣ್ ಕುಮಾರ್, ಕಡಬ ತಹಶೀಲ್ದಾರ್ ರಮೇಶ್, ಉಪತಹಶೀಲ್ದಾರ್ ಗೋಪಾಲ ಕಲ್ಲುಗುಡ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಗಂಗಮ್ಮ, ಪಿಡಿಒ ಗುರುವ ಎಸ್. ತಾ.ಪಂ. ವ್ಯವಸ್ಥಾಪಕ ಭುವನೇಂದ್ರ ಸುಬ್ರಹ್ಮಣ್ಯ ಆರ್.ಎಫ್.ಒ. ರಾಘವೇಂದ್ರ, ಪಂಜ ಆರ್.ಎಫ್.ಒ. ಮಂಜುನಾಥ, ಕಡಬ ಎಸೈ ಹರೀಶ್, ಸುಬ್ರಹ್ಮಣ್ಯ ಎಸೈ ಮಂಜುನಾಥ, ಎಸೈ ರಾಜೇಶ್ ಸೇರಿದಂತೆ ವಿವಿಧ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಇಲಾಖೆಗಳ ಅಧಿಕಾರಿಗಳು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ಸಾರ್ವಜನಿಕರು ಸ್ಥಳದಲ್ಲಿದ್ದರು.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲ ಎಂಬಲ್ಲಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ಸ್ಥಳೀಯ ರಂಜಿತಾ (25) ಹಾಗೂ ರಮೇಶ್ ರೈ(58) ಎಂಬವರು ಮೃತರಾಗಿದ್ದರು.